ಅಪರಾಧಮುಕ್ತ ಮಂಗಳೂರಿಗೆ ಜನರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು – ಕಾಮತ್

ಅಪರಾಧಮುಕ್ತ ಮಂಗಳೂರಿಗೆ ಜನರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು – ಕಾಮತ್

ಡ್ರಗ್ಸ್ – ಗಾಂಜಾ, ಕ್ರಿಕೆಟ್ ಬೆಟ್ಟಿಂಗ್ ಸಹಿತ ನಗರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಇದೀಗ ಸಾಮಾಜಿಕ ಜಾಲತಾಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳುತ್ತಿರುವ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅಭಿನಂದಿಸಿದ್ದಾರೆ.
ಪೊಲೀಸರು ಸಾರ್ವಜನಿಕರ ಸ್ನೇಹಿಯಾಗುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ ಮಾಹಿತಿ, ಮಾರ್ಗದರ್ಶನ ನೀಡುವ ಸಲುವಾಗಿ ಅಳವಡಿಸಿರುವ ಡಿಜಿಟಲ್ ಡಿಸ್ ಪ್ಲೇಗಳಲ್ಲಿ ಹಾಕಿರುವ ಇಮೇಲ್ ಐಡಿ ವಿಳಾಸಕ್ಕೆ ಅಥವಾ ದೂರವಾಣಿ ಸಂಖ್ಯೆ 9480802300 ಮೊಬೈಲ್ ಸಂಖ್ಯೆಗೆ ವಾಟ್ಸಪ್ ಮಾಡಿ ಯಾವುದೇ ಅಪರಾಧ ನಡೆದಿರುವುದು ನಿಮ್ಮ ಗಮನಕ್ಕೆ ಬಂದಲ್ಲಿ ತಿಳಿಸಲು ಪೊಲೀಸ್ ಕಮೀಷನರ್ ಅವರು ಮಾಡಿರುವ ಮನವಿಗೆ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ಇನ್ನಷ್ಟು ಜನರು ನಮ್ಮ ಮಂಗಳೂರು ನಗರವನ್ನು ಅಪರಾಧಮುಕ್ತ ಮಾಡಲು ಮುಂದೆ ಬಂದು ಜನಪ್ರತಿನಿಧಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಶಾಸಕ ಕಾಮತ್ ಜನರಲ್ಲಿ ಮನವಿ ಮಾಡಿದ್ದಾರೆ. ಡ್ರ್ಸಗ್ಸ್ ಜಾಲವನ್ನು ನಮ್ಮ ನಗರದಿಂದ ಓಡಿಸಲು ಬೇರೆ ಸಲಹೆಗಳು ಕೂಡ ಇದ್ದಲ್ಲಿ ನಾಗರಿಕರು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Latest News
also read