ಜನರ ಬೇಡಿಕೆಗಳನ್ನು ಈಡೇರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ – ಶಾಸಕ ಕಾಮತ್

ಜನರ ಬೇಡಿಕೆಗಳನ್ನು ಈಡೇರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ – ಶಾಸಕ ಕಾಮತ್

September 23: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲ್ಲಿಗುಡ್ಡೆಯ ಜಯನಗರ ಪ್ರದೇಶಕ್ಕೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು.ಈ ವೇಳೆ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳ ಹಿಂದೆ ಈ ಪ್ರದೇಶವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು ಅದಕ್ಕೂ ಮೊದಲು ಈ ಭಾಗ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿತ್ತು. ಈ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ. ಮೂಲಭೂತ ಸೌಕರ್ಯಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ. ಈ ಕ್ಷೇತ್ರದ ಶಾಸಕನ ನೆಲೆಯಲ್ಲಿ ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು,ವಸಂತ್ ಜೆ ಪೂಜಾರಿ,ವಾರ್ಡ್ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಚಂದ್ರಶೇಖರ್ ಜಯನಗರ, ಮಂಡಲ ಸದಸ್ಯರಾದ ಶಿವಾಜಿ ರಾವ್, ಯಶವಂತ ಶೆಟ್ಟಿ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read next

Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read