ಮಂಗಳೂರಿನಲ್ಲಿ ಮೋದಿ ರ್ಯಾಲಿ ಹೊಸ ಇತಿಹಾಸನಿರ್ಮಿಸಲಿದೆ – ಸುನಿಲ್ ಕುಮಾರ್
ಮಂಗಳೂರಿನಲ್ಲಿ ಮೋದಿ ರ್ಯಾಲಿ ಹೊಸ ಇತಿಹಾಸನಿರ್ಮಿಸಲಿದೆ – ಸುನಿಲ್ ಕುಮಾರ್
April 10: ಲೋಕ ಸಮರಕ್ಕೆ ಬೆರಳೆಣಿಕೆಯ ದಿನಗಳು ಬಾಕಿಯಿರುವಂತೆ ಕರಾವಳಿಯಲ್ಲಿ ಭಾಜಪಾ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊತ್ತುಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕಳೆದ ಬಾರಿ ನರೇಂದ್ರ ಮೋದಿ ಮಂಗಳೂರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದಾಗ ದಾಖಲೆಯ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಹೊಸ ಇತಿಹಾಸ ನಿರ್ಮಿಸಿದ್ದೆವು.ಆದರೆ ಈ ಬಾರಿಯ ಸಮಾವೇಶ ಇದುವರೆಗಿನ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ನಿರ್ಮಿಸಲಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಮಂಗಳೂರು ನಗರ ದಕ್ಷಿಣ ಮಂಡಲದಿಂದಲೇ ಸುಮಾರು 25 ಸಾವಿರ ಜನರು ಭಾಗವಹಿಸುವ ಯೋಜನೆಯಿದೆ.ಕಳೆದ ಬಾರಿಗಿಂತಲೂ ಹೆಚ್ಚಿನ ಲೀಡ್ ನೀಡುವ ಮೂಲಕ ಪ್ರಧಾನಿ ಮೋದಿಜೀ ಅವರ ಕೈ ಬಲಪಡಿಸುವಲ್ಲಿ ನಮ್ಮ ಕ್ಷೇತ್ರ ಮಹತ್ತರವಾದ ಪಾತ್ರ ವಹಿಸಲಿದೆ ಎಂದರು.
ಎಪ್ರಿಲ್ 13 ರಂದು ನಡೆಯುವ ಸಮಾವೇಶದ ಪೂರ್ವಭಾವಿ ತಯಾರಿಗಾಗಿ ಸಭೆ ಕರೆಯಲಾಗಿತ್ತು.ಸಭೆಯಲ್ಲಿ ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ,ಪ್ರತಾಪ್ ಸಿಂಹ ನಾಯಕ್,ಬ್ರಿಜೇಶ್ ಚೌಟ,ಪ್ರೇಮಾನಂದ ಶೆಟ್ಟಿ, ಗಣೇಶ್ ಹೊಸಬೆಟ್ಟು,ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಶ್ರೀನಿವಾಸ್ ಶೇಟ್ ಮುಂತಾದವರು ಉಪಸ್ಥಿತರಿದ್ದರು.