ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ
ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ
ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರದ ನೂತನ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ ಇಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಶಾಸಕರಾದ ಶ್ರೀ ಸಂಜೀವ ಮಠಂದೂರು, ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ಭರತ್ ಶೆಟ್ಟಿ, ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಶ್ರೀ ಉಮಾನಾಥ್ ಕೋಟ್ಯಾನ್, ಇತರ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
Latest News